ಅಂಬೇಡ್ಕರ್ ಸಿದ್ಧಾಂತಕ್ಕೆ ಅಗೌರವ

ದಿ ಡೈಲಿ ನ್ಯೂಸ್ ಬೆಂಗಳೂರು
ಅಂಬೇಡ್ಕರ್ ಅವರ ಸಿದ್ಧಾಂತವನ್ನು ದೇಶ ಹಾಗೂ ವಿದೇಶಗಳಲ್ಲಿ ಪಾಲಿಸಲಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ಬಿಜೆಪಿ ಸರ್ಕಾರ ಅಂಬೇಡ್ಕರ್ ಅವರ ಸಿದ್ಧಾಂತವನ್ನು ಅಗೌರವಿಸಿದೆ. ನಕಲಿ ಮೀಸಲಾತಿ ಮೂಲಕ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ. ಅಷ್ಟೇ ಅಲ್ಲದೆ, ಈ ನಕಲಿ ಮೀಸಲಾತಿ ಮೂಲಕ ಲಿಂಗಾಯತ, ಒಕ್ಕಲಿಗ, ಹಿಂದುಳಿದ, ಪರಿಶಿಷ್ಟ ಜಾತಿ ಹಾಗೂ ಪಂಗಡಗಳ, ಅಲ್ಪಸಂಖ್ಯಾತರಿಗೆ ದ್ರೋಹ ಬಗೆದಿದೆ. ಬಿಜೆಪಿ ಸರ್ಕಾರದ ಈ ದ್ರೋಹ ಈಗ ಬಯಲಾಗಿದೆ ಎಂದು ಎಐಸಿಸಿ ಪ್ರ‘ಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಹಾಗೂ ಬೊಮ್ಮಾಯಿ ಸರ್ಕಾರ ಕ್ಷಮಿಸಲಾಗದ ದ್ರೋಹ ಬಗೆದಿದೆ. ಈ ಸರ್ಕಾರ ಒಕ್ಕಲಿಗ, ಲಿಂಗಾಯತ, ಪರಿಶಿಷ್ಟ ಜಾತಿ- ಪಂಗಡಗಳಿಗೆ ಹೆಚ್ಚಳ ಮಾಡಲಾಗಿದ್ದ ಮೀಸಲನ್ನ್ನು ಏ.13ರಂದು ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ಮುಂದಿನ ವಿಚಾರಣೆವರೆಗೆ ತಡೆ ಹಿಡಿಯುವ ಮೂಲಕ ಬೊಮ್ಮಾಯಿ ಅವರ ಸರ್ಕಾರ ಈ ಸಮುದಾಯಗಳಿಗೆ ಅನ್ಯಾಯ ಮಾಡಿದೆ. ಕಳೆದ ಮೂರು ಪತ್ರಿಕಾಗೋಷ್ಠಿಗಳಲ್ಲಿ ಕಾಂಗ್ರೆಸ್ ಪಕ್ಷ ಹೇಳಿಕೊಂಡು ಬಂದ ಎಲ್ಲ ಅಂಶಗಳು ಈಗ ನಿಜವಾಗಿವೆ. ಬೊಮ್ಮಾಯಿ ಹಾಗೂ ಮೋದಿ ಅವರು ಡಬಲ್ ಇಂಜಿನ್ ಸರ್ಕಾರ ರಾಜ್ಯದ ಜನರಿಗೆ ಡಬಲ್ ದ್ರೋಹ ಬಗೆದಿವೆ. ಮೀಸಲಾತಿ ಹೆಸರಲ್ಲಿ ಬಿಜೆಪಿ ಸರ್ಕಾರ ಈ ಸಮುದಾಯಗಳ ಜನರನ್ನು ಮೋಸ ಮಾಡಿದೆ ಎಂದರು.

 

 

 

 

The Daily News Media

The Daily News Media