ಸರ್ವಿಸ್ ರಸ್ತೆಯಿಲ್ಲದೆ ಟೋಲ್ ಶುಲ್ಕ: ಆಕ್ಷೇಪ

ದಿ ಡೈಲಿ ನ್ಯೂಸ್ ತುಮಕೂರು
ಜಿಲ್ಲೆಯಲ್ಲಿ ನಂಜುಂಡಪ್ಪ ವರದಿ ಪ್ರಕಾರ ಅತಿ ಹಿಂದುಳಿದಿರುವ ತಾಲೂಕುಗಳಾಗಿರುವ ಕೊರಟಗೆರೆ, ಮ‘ುಗಿರಿ ಹಾಗೂ ಪಾವಗಡ ತಾಲೂಕಿನ ಜನರು ಸಂಚರಿಸುವ ರಾಜ್ಯ ಹೆದ್ದಾರಿಯಲ್ಲಿ ಸ್ಥಾಪಿಸಲಾಗಿರುವ ಟೋಲ್‌ನಲ್ಲಿ ಸರ್ವಿಸ್ ರಸ್ತೆ ನಿರ್ಮಿಸದೆ ಶುಲ್ಕ ವಸೂಲಿ ಮಾಡಬಾರದೆಂದು ಮ‘ುಗಿರಿ ಶಾಸಕ ಕೆ.ಎನ್.ರಾಜಣ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೊರಟಗೆರೆ ಸಮೀಪ ರಾಜ್ಯ ಹೆದ್ದಾರಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಎರಡು ಟೋಲ್‌ಗಳನ್ನು ಸ್ಥಾಪಿಸಲಾಗಿದೆ. ಈ ಟೋಲ್‌ಗಳಲ್ಲಿ ವಾಹನ ಸವಾರರಿಂದ ಶುಲ್ಕ ಸ್ವೀಕಾರ ಮಾಡುತ್ತಿರುವುದರಿಂದ ಮ‘ುಗಿರಿ, ಕೊರಟಗೆರೆ ಹಾಗೂ ಪಾವಗಡ ತಾಲೂಕಿನ ಜನರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಮ‘ುಗಿರಿ, ಕೊರಟಗೆರೆ ಹಾಗೂ ಪಾವಗಡ ಈ ಮೂರು ತಾಲೂಕುಗಳು ನಂಜುಂಡಪ್ಪ ವರದಿಯಲ್ಲಿ ಅತಿ ಹಿಂದುಳಿದ ತಾಲೂಕು ಎಂದು ನಮೂದಾಗಿದೆ. ಸರ್ಕಾರ ಟೋಲ್ ಹಾಕುವುದಾದರೆ ಪಕ್ಕದಲ್ಲಿ ಸರ್ವೀಸ್ ರಸ್ತೆ ನಿರ್ಮಿಸಿ ಟೋಲ್ ಸ್ಥಾಪಿಸಬೇಕಾಗಿತ್ತು. ನಾವು ಓಡಾಡುವ ರಸ್ತೆಯಲ್ಲಿ ನಮಗೆ ಉಚಿತವಾಗಿ ಓಡಾಡುವ ಅವಕಾಶ ಇದ್ದೇ ಇರುತ್ತದೆ. ಸರ್ವೀಸ್ ರಸ್ತೆ ಮಾಡದೆ ಟೋಲ್ ಹಾಕುತ್ತಈ ‘ಾಗದ ಜನರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿದರೆ ಟೋಲ್ ತೆಗೆಸುತ್ತೇವೆ ಎಂದು ಜನರಿಗೆ ನಾನು, ಡಾ.ಜಿ.ಪರಮೇಶ್ವರ್ ಹಾಗೂ ವೆಂಕಟೇಶ್ ಅವರು ಮನವಿ ಮಾಡಿದ್ದೆವು. ಮೇ 30ಕ್ಕೆ ಈ ಟೋಲ್‌ನಲ್ಲಿ ಹಣ ವಸೂಲಿ ಮಾಡುವ ಗುತ್ತಿಗೆ ಅವಧಿ ಮುಗಿಯುತ್ತಿದೆ. ಹಾಗಾಗಿ ಜೂ.1ರಿಂದ ಮತ್ತೆ ಈ ಟೋಲ್‌ಗಳ ಗುತ್ತಿಗೆ ಅವಧಿಯನ್ನು ನವೀಕರಿಸಿ ಶುಲ್ಕ ವಸೂಲಿ ಮಾಡಬಾರದು ಎಂಬುದು ನಾನೂ ಸೇರಿದಂತೆ ಡಾ.ಜಿ.ಪರಮೇಶ್ವರ್, ವೆಂಕಟೇಶ್ ಅವರ ಒತ್ತಾಯವಾಗಿದೆ ಎಂದಿದ್ದಾರೆ. ಸರ್ವೀಸ್ ರಸ್ತೆ ನಿರ್ಮಿಸದೇ ಟೋಲ್ ಹಣ ವಸೂಲಿ ಮಾಡುವುದು ಅವೈಜ್ಞಾನಿಕ. ಜೂ.1ರಿಂದ ಟೋಲ್‌ನಲ್ಲಿ ವಾಹನ ಸವಾರರಿಂದ ಹಣ ವಸೂಲಿ ಮಾಡುವುದನ್ನು ನಿಲ್ಲಿಸಬೇಕು. ಈ ಬೇಡಿಕೆಗೆ ಸ್ಪಂದಿಸದೆ ವ್ಯತಿರಿಕ್ತವಾಗಿ ನಡೆದರೆ ಅದಕ್ಕೆ ಜನರು ಅವರದೇ ಆದ ರೀತಿಯಲ್ಲಿ ‘ಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಇದಕ್ಕೆ ನಾವ್ಯಾರು ಕಾರಣರಾಗುವುದಿಲ್ಲ. ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಬೇಕು ಎಂದಿರುವ ಶಾಸಕ ಕೆ.ಎನ್.ರಾಜಣ್ಣ ಅವರು, ಜೂ.1ರಿಂದ ಟೋಲ್ ಹಣವನ್ನು ಜನರಿಂದ ಸ್ವೀಕರಿಸುವುದು ನಿಲ್ಲಬೇಕೆಂದು ಒತ್ತಾಯಿಸಿದ್ದಾರೆ.

 

The Daily News Media

The Daily News Media