‘ೈರತಿ ರಣಗಲ್ ಚಿತ್ರಕ್ಕೆ ಚಾಲನೆ

ದಿ ಡೈಲಿ ನ್ಯೂಸ್ ಬೆಂಗಳೂರು
ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸುತ್ತಿರುವ, ನರ್ತನ್ ನಿರ್ದೇಶನದ, ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ‘ೈರತಿ ರಣಗಲ್ ಚಿತ್ರದ ಮುಹೂರ್ತ ಸಮಾರಂ‘ ಗವಿಪುರದ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂ‘ದಲ್ಲಿ ‘ಾಗವಹಿಸಿದ್ದರು.
ಮಫ್ತಿ ಚಿತ್ರದ ಶಿವರಾಜಕುಮಾರ್ ಅವರ ‘ೈರತಿ ರಣಗಲ್ ಪಾತ್ರ ಇನ್ನು ಎಲ್ಲರ ಮನದಲ್ಲಿದೆ. ಆ ಪಾತ್ರವನ್ನು ಕೇಂದ್ರವಾಗಿಟ್ಟುಕೊಂಡು ಈ ಚಿತ್ರದ ಕಥೆ ಮಾಡಲಾಗಿದೆ. ಇದು ಮಫ್ತಿ ಚಿತ್ರದ ಪ್ರೀಕ್ವೆಲ್. ಮಫ್ತಿ ಚಿತ್ರದಲ್ಲಿ ಮ‘್ಯಂತರದ ನಂತರ ಈ ಪಾತ್ರ ಬರುತ್ತದೆ. ಇಲ್ಲಿ ‘ೈರತಿ ರಣಗಲ್ ಆಗಿದ್ದು ಹೇಗೆ ಎಂದು ತಿಳಿಯುತ್ತದೆ. ಶಿವರಾಜಕುಮಾರ್ ಅವರು ಈ ಚಿತ್ರದ ನಾಯಕರಾಗಲು ಒಪ್ಪಿರುವುದು ಹಾಗೂ ಗೀತಾ ಶಿವರಾಜಕುಮಾರ್ ಅವರು ನಿರ್ಮಾಣ ಮಾಡುತ್ತಿರುವುದು ತುಂಬಾ ಸಂತೋಷವಾಗಿದೆ ಎಂದು ನಿರ್ದೇಶಕ ನರ್ತನ್ ತಿಳಿಸಿದರು.
ಚಿತ್ರದ ಪ್ರಾರಂ‘ಕ್ಕೆ ಸಮಯ ಈಗ ಕೂಡಿ ಬಂದಿದೆ. ಮಫ್ತಿ ಬಂದು ಆರು ವರ್ಷಗಳಾಗಿದೆ. ಈಗಲೂ ನಾನು ಹಾಗೆ ಇದ್ದೀನಿ. ಹಾಗಾಗಿ ಈ ಪಾತ್ರ ಮಾಡಲು ಅನುಕೂಲವಾಗುತ್ತದೆ. ಪ್ರೀಕ್ವೆಲ್ ಆಗಿರುವುದರಿಂದ ಡಿರೆಂಟ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತೇನೆ. ನರ್ತನ್ ಕಥೆ ಚಿನ್ನಾಗಿ ಮಾಡಿಕೊಂಡಿದ್ದಾರೆ ಎಂದರು ನಾಯಕ ಶಿವರಾಜಕುಮಾರ್.
ನಿರ್ಮಾಪಕಿ ಗೀತಾ ಶಿವರಾಜಕುಮಾರ್, ನಿವೇದಿತಾ ಶಿವರಾಜಕುಮಾರ್, ಕೆ.ಪಿ.ಶ್ರೀಕಾಂತ್, ಛಾಯಾಗ್ರಹಕ ನವೀನ್ ಕುಮಾರ್ ಹಾಗೂ ಕಲಾ ನಿರ್ದೇಶಕ ಶಿವಕುಮಾರ್ ಇದ್ದರು.

The Daily News Media

The Daily News Media