ಯಾವ ಮೋಹನ ಮುರಳಿ ಕರೆಯಿತು

ದಿ ಡೈಲಿ ನ್ಯೂಸ್ ಬೆಂಗಳೂರು
ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ ಯಾವ ಮೋಹನ ಮುರಳಿ ಕರೆಯಿತು ಎಂಬ ಹಾಡು ಬಹಳ ಜನಪ್ರಿಯ. ಈಗ ಈ ಹಾಡಿನ ಮೊದಲ ಸಾಲು ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚಿಗೆ ಯಾವ ಮೋಹನ ಮುರಳಿ ಕರೆಯಿತು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅ‘್ಯಕ್ಷ ‘ಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿ, ಚಿತ್ರಕ್ಕೆ ಶು‘ ಕೋರಿದರು. ಈ ಸಂದ‘ರ್ದಲ್ಲಿ ಉಪಾ‘್ಯಕ್ಷ ಶಿಲ್ಪ ಶ್ರೀನಿವಾಸ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಯಾವ ಮೋಹನ ಮುರಳಿ ಕರೆಯಿತು ಮನುಷ್ಯ ಹಾಗೂ ಶ್ವಾನದ ನಡುವಿನ ಪ್ರೀತಿಯ ಕುರಿತಾದ ಚಿತ್ರ. ಕನ್ನಡದಲ್ಲಿ ಶ್ವಾನದ ಕುರಿತಾದ ಚಿತ್ರಗಳು ಬಂದಿದೆಯಾದರೂ ಇದು ಸ್ವಲ್ಪ ಭಿನ್ನ. ‘ರವಸೆಯ ಹುಡುಕಾಟದಲ್ಲಿರುವ ಅಂಗವಿಕಲ ಹುಡುಗಿಗೆ ಪ್ರೀತಿ ಅರಸಿ ಹೊರಟಿರುವ ಶ್ವಾನ ಸಿಗುತ್ತದೆ. ಇಬ್ಬರ ನಡುವೆ ಉತ್ತಮ ಬಾಂ‘ವ್ಯವಿರುತ್ತದೆ. ಆ ಸಮಯದಲ್ಲಿ ಇವರಿಬ್ಬರ ನಡುವೆ ಮತ್ತೊಬ್ಬ ವ್ಯಕ್ತಿ ಪ್ರವೇಶಿಸುತ್ತಾನೆ. ನಂತರ ಏನಾಗುತ್ತದೆ ಎಂಬುದೆ ಚಿತ್ರದ ಕಥೆ. ಈಗಾಗಲೇ ಚಿತ್ರೀಕರಣ ಮುಗಿದು ಬಿಡುಗಡೆಗೆ ಸಿದ್ದವಾಗಿದೆ. ಮೂರು ಹಾಡುಗಳಿದೆ. ಸದ್ಯದಲ್ಲೇ ಟ್ರೇಲರ್ ಬರಲಿದೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರವೆಂದರು ನಿರ್ದೇಶಕ ವಿಶ್ವಾಸ್ ಕೃಷ್ಣ.

The Daily News Media

The Daily News Media