ಎಸ್.ಆರ್.ಬೊಮ್ಮಾಯಿ ಜನ್ಮ ಶತಮಾನೋತ್ಸವ

ದಿ ಡೈಲಿ ನ್ಯೂಸ್ ಬೆಂಗಳೂರು
ಹಿರಿಯ ರಾಜಕೀಯ ಮುತ್ಸದ್ದಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್. ಬೊಮ್ಮಾಯಿಯವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಜೂ.6 ರಂದು ನಗರದ ಗಾಂಧಿ ‘ವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ನಮ್ಮ ತಂದೆ ದಿವಂಗತ ಎಸ್.ಆರ್.ಬೊಮ್ಮಾಯಿಯವರ 99 ಜನ್ಮ ದಿನಾಚರಣೆಯನ್ನು ಗಂಗಮ್ಮ ಸೋಮಪ್ಪ ಬೊಮ್ಮಾಯಿ ಎಜ್ಯುಕೇಶನ್ ಮತ್ತು ವೆಲ್ ೇರ್ ೌಂಡೇಶನ್ ವತಿಯಿಂದ ಜೂ.6ರಂದು ಸಂಜೆ 5ಗಂಟೆಗೆ ಗಾಂಧಿ ‘ವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸುತ್ತೂರು ವೀರ ಸಿಂಹಾಸನ ಮಹಾ ಸಂಸ್ಥಾನ ಮಠದ ಪೀಠಾ‘್ಯಕ್ಷ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯಸಾನಿ‘್ಯ ವಹಿಸಿಕೊಳ್ಳಲಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸುವರು.ದಿ.ಎಸ್.ಆರ್.ಬೊಮ್ಮಾಯಿಯವರ ಕುರಿತು ದಿ ನ್ಯೂ ಇಂಡಿಯನ್ ಎಕ್ಸಪ್ರೆಸ್ ನವರು ಹೊರ ತಂದಿರುವ ಕಾಫಿ ಟೇಬಲ್ ಪುಸ್ತಕವನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬಿಡುಗಡೆ ಮಾಡಲಿದ್ದಾರೆ. ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅ‘್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅ‘್ಯಕ್ಷರಾದ ಡಾ.ಸಿ. ಸೋಮಶೇಖರ್ ಪ್ರಾಸ್ತಾವಿಕ ಮಾತನಾಡಲಿದ್ದಾರೆ. ಕರ್ನಾಟಕ ವಿ‘ಾನ ಪರಿಷತ್, ಮಾಜಿ ಸ‘ಾಪತಿ ಬಿ.ಎಲ್. ಶಂಕರ್ ಅವರು ಕೃತಿ ಕುರಿತು ಮಾತನಾಡಲಿದ್ದಾರೆ. ಕಾರ್ಯಕ್ರಮಕ್ಕೆ ಮುನ್ನ ಹಿನ್ನೆಲೆ ಗಾಯಕಿ ಶ್ರೀಮತಿ ನಾಗಚಂದ್ರಿಕಾ ‘ಟ್ ಅವರ ಗಾಯನ ಕಾರ್ಯಕ್ರಮ ಇದೆ ಎಂದು ತಿಳಿಸಿದ್ದಾರೆ.

The Daily News Media

The Daily News Media