ತರಬೇತಿ ಮೂಲಕ ಕೌಶಲಾಭಿವೃದ್ಧಿ

ದಿ ಡೈಲಿ ನ್ಯೂಸ್ ಮಂಡ್ಯ
ವಿಶೇ? ಚೇತನ ಮಕ್ಕಳ ಕಾಳಜಿ ವಹಿಸುವುದು ಅಗತ್ಯ ಎಂದು ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ನಗರದ ಸ್ವರ್ಣಸಂದ್ರ ಕೆಂಪೇಗೌಡ ರಸ್ತೆಯಲ್ಲಿನ ಪ್ರೇರಣ ವಿಶೇ? ಚೇತನರ ಸಂಸ್ಥೆಯಲ್ಲಿ ನಡೆದ ಸ್ಪೆ?ಲ್ ಒಲಂಪಿಕ್ಸ್ ಭಾರತ ತಂಡದವರಿಂದ ಆಯೋಜಿಸಿರುವ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
೭೫ನೇ ಅಮೃತ ಮಹೋತ್ಸವದ ಅಂಗವಾಗಿ ೭೫,೦೦೦ ವಿಶೇ? ಚೇತನ ಮಕ್ಕಳು ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸಿರುವವರನ್ನು ಗುರುತಿಸಿ ಅವರಿಗೆ ಆರೋಗ್ಯ ತಪಾಸಣೆ ಮಾಡಿ ಸಂಬಂಧಪಟ್ಟ ಚಿಕಿತ್ಸೆ ಹಾಗೂ ಪೌಷ್ಟಿಕಾಂಶವನ್ನು ನೀಡಲಾಗುವುದು ಎಂದು ತಿಳಿಸಿದರು. ಸಮಾಜ ಸೇವೆ ಮೂಲಕ ಸುಧಾರಣೆ ಹಾಗೂ ಸಮಗ್ರ ಅಭಿವೃದ್ದಿಗೆ ಪ್ರತಿಯೊಬ್ಬರು ಪ್ರಯತ್ನಿಸಬೇಕು. ಕೌಶಲಾಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ರೀತಿಯ ತರಬೇತಿಯನ್ನು ಆಯೋಜಿಸಲಾಗುತ್ತಿದೆ ಎಂದರು.
ವಿಕಲಚೇತನರ ಪ್ರೇರಣಾ ಟ್ರಸ್ಟ್ ಅಧ್ಯಕ್ಷ ಆರ್.ರಾಮಪ್ರಸಾದ್, ಟ್ರಸ್ಟ್‌ನ ರವಿಕುಮಾರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಪಿ.ಉಮೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬೇಲೂರು ಸೋಮಶೇಖರ್ ಇತರರಿದ್ದರು.
 

 

The Daily News Media

The Daily News Media