ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ಲಭ್ಯ

ದಿ ಡೈಲಿ ನ್ಯೂಸ್ ಬಳ್ಳಾರಿ
ಜನರ ಆರೋಗ್ಯದ ಕಾಳಜಿಗೆ ಸಂಬಂಧಿಸಿದಂತೆ ಅಗತ್ಯ ಸೌಲಭ್ಯಗಳನ್ನು ಆರೋಗ್ಯ ಮೇಳಗಳ ಮೂಲಕ ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಜಿಪಂ ಸಿಇಒ ಜೆ.ಲಿಂಗಮೂರ್ತಿ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ನಡೆದ ತಾಲೂಕು ಮಟ್ಟದ ಆರೋಗ್ಯ ಮೇಳಗಳ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
೭೫ನೇ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ತ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಮೇಳಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಬೇಕು. ಅದಕ್ಕೆ ಬೇಕಾದ ಸಿದ್ಧತೆಗಳನ್ನು ಎರಡು ದಿನಗಳೊಳಗೆ ನಕಾಶೆಯನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಎಲ್ಲಾ ಇಲಾಖೆಗಳಿಂದ ಸುತ್ತೋಲೆ ನೀಡುವುದರ ಮೂಲಕ ಪ್ರಚಾರ ಮಾಡಬೇಕು ಇದರಿಂದ ಸಾಮಾನ್ಯ ಜನರು ಆರೋಗ್ಯ ಮೇಳದಲ್ಲಿ ಹೆಚ್ಚು ಪಾಲ್ಗೊಳ್ಳಲು ಸಹಾಯವಾಗುತ್ತದೆ ಎಂದರು.
ಆರೋಗ್ಯ ಮೇಳದಲ್ಲಿ ಭಾಗವಹಿಸುವವರ ನೋಂದಣಿ, ಡಿಜಿಟಲ್ ಐಡಿ, ಸ್ಥಳದಲ್ಲಿಯೇ ಹೆಲ್ತ್ ಕಾರ್ಡ್ ವಿತರಣೆ, ಔ?ಧ ವಿತರಣೆ ಹಾಗೂ ಇಂಟರ್‌ನೆಟ್ ಸೌಲಭ್ಯ ಸೇರಿದಂತೆ ಅಗತ್ಯ ಸೇವೆಗಳಿಗೆ ಸಂಬಂಧಿಸಿದಂತೆ ಕೌಂಟರ್‌ಗಳನ್ನು ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಎಲ್ ಜನಾರ್ಧನ ಮಾತನಾಡಿ, ಈ ಆರೋಗ್ಯ ಮೇಳವು ಬಳ್ಳಾರಿ, ಕಂಪ್ಲಿ, ಸಂಡೂರು ತಾಲೂಕುಗಳಲ್ಲಿ ನಡೆಯಲಿದೆ. ಆರೋಗ್ಯ ಮೇಳಕ್ಕೆ ಸಂಬಂಧಿಸಿದಂತೆ ತಾಲೂಕು ಮತ್ತು ಜಿಲ್ಲಾ ಮಟ್ಟದ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

 

The Daily News Media

The Daily News Media