ನೀರಾವರಿ ಸೌಲಭ್ಯ ಕಲ್ಪಿಸುವುದೇ ಜಲಧಾರೆ

ದಿ ಡೈಲಿ ನ್ಯೂಸ್ ದೇವನಹಳ್ಳಿ
ರಾಜ್ಯದ ಪ್ರತಿ ಕುಟುಂಬಕ್ಕೆ ಶುದ್ಧ ಕುಡಿವ ನೀರು, ರೈತರಿಗೆ ಸಮಗ್ರ ನೀರು ಒದಗಿಸುವ ಸಂಕಲ್ಪದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಆಶಯದಂತೆ ಜನತಾ ಜಲಧಾರೆ ವಿನೂತನ ಯೋಜನೆಯನ್ನು ರೂಪಿಸಲಾಗಿದೆ ಎಂದು ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು. ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅನೇಕ ವರ್ಷಗಳಿಂದ ಬಯಲುಸೀಮೆ ಪ್ರದೇಶಗಳಾದ ಬೆಂ.ಗ್ರಾಮಾಂತರ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ರೈತರಿಗೆ ನೀರು ಒದಗಿಸುವ ಎತ್ತಿನ ಹೊಳೆ ಯೋಜನೆ ನನೆಗುದಿಗೆ ಬಿದ್ದಿದ್ದು ಅದು ಸಾಕಾರವಾಗಬೇಕಾದರೆ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲೇಬೇಕು. ಆಗ ಮಾತ್ರ ಕನ್ನಡ ನಾಡಿನ ಜನತೆಗೆ ನೀರಾವರಿ ಸೌಲಭ್ಯ ನೀಡಲು ಸಾಧ್ಯ. ಈ ನಿಟ್ಟಿನಲ್ಲಿ ಜನತಾ ಜಲಧಾರೆ ರಥ ತಾಲ್ಲೂಗೆ ಆಗಮಿಸಲಿದೆ ಎಂದು ತಿಳಿಸಿದರು. ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ಮಾತನಾಡಿ, ಮೇ 2ರಂದು ನಡೆಯಲಿರುವ ಜನತಾ ಜಲಧಾರೆ ಪ್ರವಾಸ ಹಾಗೂ ವಿಜಯಪುರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಏರ್ಪಡಿಸಲಾಗಿದೆ. ಇದರಲಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹಾಗೂ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಸೇರಿದಂತೆ ಎಲ್ಲಾ ಹೋಬಳಿ ಮುಖಂಡರು, ಜನಪ್ರತಿನಿಧೊಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು. ತಾಲೂಕು ಅಧ್ಯಕ್ಷ ಆರ್.ಮುನೇಗೌಡ, ಜೆಡಿಎಸ್ ಪ್ರ.ಕಾರ್ಯದರ್ಶಿ, ಜಿ.ಎ. ರವೀಂದ್ರ, ಕಲ್ಯಾಣ್‌ಬಾಬು, ಕಾರ್ಯಾಧ್ಯಕ್ಷ ಲಕ್ಷ್ಮಣ್, ಕುಂದಾಣ ಹೋಬಳಿ ಅಧ್ಯಕ್ಷ ಚಂದ್ರೇಗೌಡ, ಮಹಿಳಾ ಅಧ್ಯಕ್ಷೆ ಮೀನಾಕ್ಷಿ ಮುನಿಕೃಷ್ಣಪ್ಪ, ಶೈಲಜಾ, ನೆರಗನಹಳ್ಳಿ ಶ್ರೀನಿವಾಸ್, ಕೆ.ವಿ. ಮಂಜುನಾಥ್ ಹಾಜರಿದ್ದರು.

The Daily News Media

The Daily News Media