ಕೆರೆ ಸರಹದ್ದು ಸಂರಕ್ಷಣೆಗೆ ಕ್ರಮ

ದಿ ಡೈಲಿ ನ್ಯೂಸ್ ತುಮಕೂರು: ಇತ್ತೀಚೆಗೆ ಸುರಿಯುತ್ತಿರುವ ‘ಾರಿ ಮಳೆಯಿಂದಾಗಿ ಜಿಲ್ಲೆಯ ಎಲ್ಲ ಕೆರೆ-ಕಟ್ಟೆೆಗಳು ತುಂಬಿದ್ದು, ಇದೇ ಸಂದ‘ರ್ವನ್ನು ಬಳಸಿಕೊಂಡು ಸಂಬಂಧಿಸಿದ ಇಲಾಖೆಗಳು, ತಮ್ಮ ವ್ಯಾಪ್ತಿಯ ಕೆರೆಗಳ ಸರಹದ್ದನ್ನು ಗುರುತಿಸಿ, ಒತ್ತುವರಿ ಇದ್ದಲ್ಲಿ ತೆರವುಗೊಳಿಸಿ ಕೆರೆಗಳನ್ನು ಸಂರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಜಿಲಾಧಿಕಾರಿಗಳ ಕೆಸ್ವಾನ್ ಸ‘ಾಂಗಣದಲ್ಲಿಂದು ನಡೆದ ಕೆರೆ ಸಂರಕ್ಷಣೆ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಮಟ್ಟದ ಕಾರ್ಯಸಮಿತಿ ಸ‘ೆಯಲ್ಲಿ ಮಾತನಾಡಿ, ಜಿಲ್ಲೆಯ ಎಲ್ಲ ಜಲಮೂಲಗಳ ನೀರಿನ ಗುಣಮಟ್ಟ ವಿಶ್ಲೇಷಣೆಗೆ ಸಂಬಂಧಿಸಿದಂತೆ ಮಾಹಿತಿ ಮತ್ತು ಕೆರೆಗಳ ಒತ್ತುವರಿ ಹಾಗೂ ಮಾಲಿನ್ಯ ತಡೆಗಟ್ಟಿ ಕೆರೆಗಳನ್ನು ಪುನಶ್ಚೇತನಗೊಳಿಸಿರುವ ಸಂಬಂ‘ ಕೆರೆಗಳ ಉಸ್ತುವಾರಿ ಇಲಾಖೆಗಳು ವರದಿ ಸಲ್ಲಿಸಬೇಕು. ಕೆರೆ ಒತ್ತುವರಿ ತೆರವು ಕಾರ್ಯಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲ ಕೆರೆಗಳ ಸರ್ವೆ ಕಾರ್ಯವು ಈಗಾಗಲೇ ಪ್ರಗತಿಯಲ್ಲಿದ್ದು, ಆಯಾ ಇಲಾಖೆಗಳು ಸಹ ಕೆರೆಗಳ ಗಡಿ ಗುರುತಿಸಿ ಕೆರೆಗಳನ್ನು ಸಂರಕ್ಷಿಸಿಕೊಳ್ಳುವಂತೆ ನಿರ್ದೇಶಿಸಿದರು.
ನಗರದ ಮರಳೂರು ಅಮಾನಿಕೆರೆಗೆ ತ್ಯಾಜ್ಯ ನೀರನ್ನು ಹರಿಬಿಡುತ್ತಿರುವ ವಿಷಯದ ಬಗ್ಗೆ ಸ್ಪಷ್ಟನೆ ನೀಡಿದ ಪಾಲಿಕೆ ಆಯುಕ್ತರು, ತ್ಯಾಜ್ಯ ನೀರನ್ನು ತಡೆಯಲು ಪೈಪ್‌ಲೈನ್ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ಛೇಂಬರ್ ನಿರ್ಮಾಣ ಕಾಮಗಾರಿಯು ಬಾಕಿ ಇರುತ್ತದೆ. ಈ ಕಾಮಗಾರಿ ಪೂರ್ಣಗೊಂಡ ನಂತರ ತ್ಯಾಜ್ಯ ನೀರು ಕೆರೆಗೆ ಹರಿಯುವುದನ್ನು ತಡೆಯಬಹುದಾಗಿದೆ ಎಂದು ತಿಳಿಸಿದರು.
ತುಮಕೂರು ನಗರದ ಅಮಾನಿಕೆರೆ ಬರ್‌ಜೋನ್‌ನಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಕಟ್ಟಡವನ್ನು ತೆರವುಗೊಳಿಸುವ ಸಂಬಂ‘ ಮಾತನಾಡಿದ ಪಾಲಿಕೆ ಆಯುಕ್ತರು, ಬರ್‌ಜೋನ್‌ನಲ್ಲಿ ನಿರ್ಮಾಣ ಮಾಡಿರುವ ಎರಡು ವಾಣಿಜ್ಯ ಕಟ್ಟಡಗಳನ್ನು ತೆರವುಗೊಳಿಸಲು ಪೂರಕ ಕ್ರಮ ಕೈಗೊಳ್ಳಲಾಗಿದೆ. ಆದರೆ ಎರಡೂ ಪ್ರಕರಣಗಳು ನ್ಯಾಯಾಲಯ ಹಂತದಲ್ಲಿ ಬಾಕಿ ಇರುತ್ತದೆ ಎಂದು ವಿವರಿಸಿದರು.
ನಗರದ ಡಿಸಿ ಬಂಗಲೆ ಮತ್ತು ಕೆಎಸ್‌ಆರ್‌ಟಿಸಿ ಬಸ್ ಡಿಪೋಗೆ ಹೊಂದಿಕೊಂಡಿರುವ ಸರ್ವೇ ನಂ. 8ರಲ್ಲಿನ ಸರ್ಕಾರಿ ಕೆರೆಯು ನಿರ್ವಹಣೆ ಕೊರತೆಯಿಂದಾಗಿ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದ್ದು, ಅದನ್ನು ಪುನಶ್ಚೇತನಗೊಳಿಸಲು ಸೂಚಿಸಲಾಗಿದೆ. ಅದಕ್ಕೂ ಮೊದಲು ಕೆರೆಯ ಗಡಿಗಳನ್ನು ಗುರುತಿಸಿ, ಸರ್ವೇ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ‘ೂ ದಾಖಲೆಗಳ ಉಪನಿರ್ದೇಶಕರು ತಿಳಿಸಿದರು.
ಸ‘ೆಯಲ್ಲಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಾಧಿಕಾರದ ಸದಸ್ಯರಾದ ನೂರುನ್ನೀಸ, ಜಿಪಂ ಸಿಇಒ ಡಾ. ಕೆ.ವಿದ್ಯಾಕುಮಾರಿ, ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಉಪಸ್ಥಿತರಿದ್ದರು.

The Daily News Media

The Daily News Media