ಭಿಕ್ಷಾಟನೆ ನಿರ್ಮೂಲನೆ ಜಾಗೃತಿ

ದಿ ಡೈಲಿ ನ್ಯೂಸ ತುಮಕೂರು
ಭಿಕ್ಷಾಟನೆ ನಿರ್ಮೂಲನೆಗಾಗಿ ಜನರಲ್ಲಿ ಅರಿವು ಮೂಡಿಸಲು ಪ್ರಚಾರ ವಾಹನದ ಮೂಲಕ ಸೆಪ್ಟೆಂಬರ್ ಅಂತ್ಯದವರೆಗೂ ಜನ-ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಟಿ.ಎಸ್.ಎಲ್ ಪ್ರೇಮಾ ಹೇಳಿದ್ದಾರೆ. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕೇಂದ್ರ ಪರಿಹಾರ ಸುತಿ, ನಿರಾಶ್ರಿತರ ಪರಿಹಾರ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಕಚೇರಿಯ ಎದುರು ಭಿಕ್ಷಾಟನೆ ನಿರ್ಮೂಲನೆಗಾಗಿ ಜನಜಾಗೃತಿ ಕಾರ್ಯಕ್ರಮದ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಭಿಕ್ಷಾಟನೆಯಲ್ಲಿ ಇರುವವರಿಗೆ ಬೇರೆ ರೀತಿಯ ಉದ್ಯೋಗಾವಕಾಶಗಳನ್ನು ನೀಡುವ ಉದ್ದೇಶದಿಂದ ಭಿಕ್ಷಾಟನೆ ನಿರ್ಮೂಲನೆಗಾಗಿ ಜನ-ಜಾಗೃತಿ ಕಾರ್ಯಕ್ರಮ ಹ್ಮುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ನಿರಾಶ್ರಿತರ ಪರಿಹಾರ ಕೇಂದ್ರದ ಅಽಕ್ಷಕ ಜಿ.ಬಿ. ಮಾರಪ್ಪ ಮಾತನಾಡಿ,ಈ ತಿಂಗಳಾಂತ್ಯದವರೆಗೆ ಜಿಲ್ಲಾದ್ಯಂತ ಭಿಕ್ಷಾಟನೆ ನಿರ್ಮೂಲನೆಗಾಗಿ ಜನ-ಜಾಗೃತಿ ಕಾರ್ಯಕ್ರಮದ ಪ್ರಚಾರ ವಾಹನದ ಮೂಲಕ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುವುದೆಂದು ಹೇಳಿದ್ದಾರೆ. ಜಿಲ್ಲಾ ಆರ್‌ಸಿಎಚ್ ಅಽಕಾರಿ ಡಾ.ಕೇಶವರಾಜ್, ಜಿಲ್ಲಾ ಸರ್ವೇಕ್ಷಣಾಽಕಾರಿ ಡಾ.ಮೋಹನ್ ದಾಸ್ ಇನ್ನಿತರ ಅಽಕಾರಿಗಳು, ಸಿಬ್ಬಂದಿ ಹಾಜರಿದ್ದರು.

The Daily News Media

The Daily News Media