ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಲೋಕಾರ್ಪಣೆ

ದಿ ಡೈಲಿ ನ್ಯೂಸ್ ಬೆಂಗಳೂರು
ಬಿಬಿಎಂಪಿಉ ೩೦೦ ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಶೀಘ್ರವೇ ಉದ್ಘಾಟಿಸುವುದಾಗಿ ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಗೋವಿಂದರಾಜನಗರ ವಿ‘ನಸ‘ ಕ್ಷೇತ್ರ ಅಗ್ರಹಾರ ದಾಸರಹಳ್ಳಿ ವಾರ್ಡ್ ಎಂ.ಸಿ ಲೇಔಟ್ ನಲ್ಲಿ ೩೦೦ ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯ ಪರಿಶೀಲನೆಯ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಹೆರಿಗೆ ಆಸ್ಪತ್ರೆಯಿದ್ದ ಸ್ಥಳದಲ್ಲಿ ಇಂದು ಎ ರೀತಿಯ ಸೌಲ‘ಗಳುಳ್ಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.
ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ೩೦೦ ಹಾಸಿಗೆಗಳು, ೭ ಆಪರೇಷನ್ ಥಿಯೇಟರ್‌ಗಳಿವೆ. ಕಿದ್ವಾಯಿ ಆಸ್ಪತ್ರೆಯ ಜೊತೆ ಒಡಂಬಡಿಕೆ ಮಾಡಿಕೊಳ್ಳುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಜೊತೆಗೆ ನಿಮ್ಹಾನ್ಸ್, ಜಯದೇವ ಹೃದ್ರೋಗ ಆಸ್ಪತ್ರೆಯೊಂದಿಗೂ ಮಾತುಕತೆ ನಡೆಯುತ್ತಿದೆ. ಇದು ಜನರಲ್ ಆಸ್ಪತ್ರೆಯಾಗಿದ್ದು, ಎ ರೀತಿಯ ಚಿಕಿತ್ಸೆ ಲ‘ವಿದೆ. ಎ ವೈದ್ಯಕೀಯ ಸಲಕರಣೆಗಳ ಜೊತೆ ಎಮಆರ್‌ಐನಿಂದ ಹಿಡಿದು ಎ ರೀತಿಯ ಚಿಕಿತ್ಸೆಯನ್ನು ಬಡವರಿಗೆ ಅನುಕೂಲವಾಗುವ ರೀತಿಯಲ್ಲಿ ಆರಂಭಿಸಲಾಗುತ್ತಿದೆ ಎಂದರು.
ಸರ್ಕಾರದ ಅಮೃತ ನಗರೋತ್ಥಾನದ ಅನುದಾನದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿದ್ದು, ಬಿಬಿಎಂಪಿಯು ಆಸ್ಪತ್ರೆಯನ್ನು ನಡೆಸಿಕೊಂಡು ಹೋಗಲಿದೆ. ಆಸ್ಪತ್ರೆ ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ವಿದ್ಯುತ್, ವೈದ್ಯಕೀಯ ಉಪಕರಣಗಳ ಅಳವಡಿಕೆ ಹಾಗೂ ಸ್ವಚ್ಛತೆ ಬಾಕಿಯಿದ್ದು, ತ್ವರಿತವಾಗಿ ಪೂರ್ಣಗೊಳಿಸಲು ಅಽಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಆರೋಗ್ಯ ವಿ‘ಗದ ವಿಶೇಷ ಆಯುಕ್ತ ಡಾ. ತ್ರಿಲೋಕ್ ಚಂದ್ರ, ವಲಯ ಜಂಟಿ ಆಯುಕ್ತ ಯೋಗೇಶ್, ವಲಯ ಮುಖ್ಯ ಎಂಜಿನಿಯರ್ ದೊಡ್ಡಯ್ಯ ಹಾಗೂ ಇನ್ನಿತರೆ ಅಽಕಾರಿಗಳು ಉಪಸ್ಥಿತರಿದ್ದರು.

The Daily News Media

The Daily News Media