೨೦ಕ್ಕೆ ಎಸ್‌ಟಿ ಮೋರ್ಚಾ ನವಶಕ್ತಿ ಸಮಾವೇಶ

ದಿ ಡೈಲಿ ನ್ಯೂಸ್ ಬೆಂಗಳೂರು
ಬಳ್ಳಾರಿಯಲ್ಲಿ ನ.೨೦ರಂದು ಬಿಜೆಪಿ ಎಸ್‌ಟಿ ಮೋರ್ಚಾ ನವಶಕ್ತಿ ಸಮಾವೇಶ ನಡೆಯಲಿದ್ದು, ಪಕ್ಷದ ರಾಷ್ಟ್ರೀಯ ಅ‘ಕ್ಷ ಜೆ.ಪಿ.ನಡ್ಡಾ ಅವರು ಉದ್ಘಾಟಿಸಲಿzರೆ. ಸಮಾವೇಶದಲ್ಲಿ ಸುಮಾರು ೧೦ ಲಕ್ಷ ಜನರು ‘ಗವಹಿಸುವ ನಿರೀಕ್ಷೆ ಇದೆ ಎಂದು ಎಸ್‌ಟಿ ಮೋರ್ಚಾ ರಾಜ್ಯ ಅ‘ಕ್ಷ ತಿಪ್ಪರಾಜು ಹವಾಲ್ದಾರ್ ಅವರು ತಿಳಿಸಿದರು.
ಮಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ‘ವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಅವರು ‘ಗವಹಿಸುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾ‘ಕ್ಷ ನಳಿನ್‌ಕುಮಾರ್ ಕಟೀಲ, ಕೇಂದ್ರ ರಾಜ್ಯ ಸರಕಾರಗಳ ಸಚಿವರು, ಕೋರ್ ಕಮಿಟಿ ಸದಸ್ಯರು ಪಾಲ್ಗೊಳ್ಳಲಿzರೆ ಎಂದು ವಿವರಿಸಿದರು. ಕೊಪ್ಪಳ, ರಾಯಚೂರು, ಯಾದಗಿರಿ, ಚಿತ್ರದುರ್ಗ, ಬಳ್ಳಾರಿ, ಹಳೆ ಮೈಸೂರು, ಮ‘ ಕರ್ನಾಟಕದ ಸುತ್ತಲಿನ ಪ್ರದೇಶಗಳಿಂದ ೬ ಲಕ್ಷ ಜನರನ್ನು ನಿರೀಕ್ಷಿಸಲಾಗಿದೆ. ರಾಜ್ಯದ ಎಲ್ಲ ಜಿಗಳಿಂದ ಈ ಸಮಾವೇಶಕ್ಕೆ ೪ ಲಕ್ಷ ಜನರು ಬರಲಿzರೆ. ೬,೨೦೦ ಬಸ್ ವ್ಯವಸ್ಥೆ ಮಾಡಲಾಗಿದೆ. ೧೫ರಿಂದ ೧೮ ಸಾವಿರ ಕ್ರೂಸರ್ ವಾಹನ ವ್ಯವಸ್ಥೆ ಇದೆ. ಬಳ್ಳಾರಿಯಲ್ಲಿ ೨೪ ಕಡೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಬಿಜೆಪಿ ರಾಜ್ಯ ಪ್ರ‘ನ ಕಾರ್ಯದರ್ಶಿ ಅಶ್ವತ್ಥನಾರಾಯಣ, ಎಸ್‌ಟಿ ಮೋರ್ಚಾ ರಾಜ್ಯ ಪ್ರ‘ನ ಕಾರ್ಯದರ್ಶಿಗಳಾದ ನರಸಿಂಹ ನಾಯ್ಕ ಮತ್ತು ಮಂಜುನಾಥ್ ಓಲೆಕಾರ ಹಾಜರಿದ್ದರು.

The Daily News Media

The Daily News Media