ಸಿಎಂ ‘ಷಣ ತಿರುಚಿದವರ ವಿರುದ್ಧ ದೂರು

ತುಮಕೂರು: ಜನಸಂಕಲ್ಪ ಯಾತ್ರೆಯಲ್ಲಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ‘ಷಣವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊರಟಗೆರೆ ಬಿಜೆಪಿ ಮಂಡಲ ಅ‘ಕ್ಷ ಪವನ್ ಕುಮಾರ್ ಅವರು ಪೊಲೀಸ್ ಠಾಣೆಗೆ ದೂರು ನೀಡಿzರೆ.
ಜಿಯ ಕೊರಟಗೆರೆಯಲ್ಲಿ ನಡೆದಿದ್ದ ಜನಸಂಕಲ್ಪ ಯಾತ್ರೆಯಲ್ಲಿನ ‘ಷಣವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಸಾರ್ವಜನಿಕ ಸೇವಾ ಬಳಗ ಎಂಬ ವಾಟ್ಸಾಪ್ ಗ್ರೂಪ್ ಹಾಗೂ ಡಾ.ಜಿ.ಪರಮೇಶ್ವರ್ ಕೊರಟಗೆರೆ ಎಂಬ ಸಬುಕ್ ಪೇಜ್ ಸೇರಿ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸಿಎಂ ಬೊಮ್ಮಾಯಿ ಅವರು ‘ಷಣದ ವೇಳೆ, ಕಾಂಗ್ರೆಸ್‌ನ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್‌ನವರೇ ಸೋಲಿಸುತ್ತಾರೆ ಎಂದಿದ್ದರು. ಈ ಹೇಳಿಕೆಯನ್ನು ಪರಮೇಶ್ವರ್‌ಗೆ ಅತಿ ಹೆಚ್ಚು ಮತಗಳನ್ನು ಕೊಟ್ಟು ಗೆಲ್ಲಿಸಬೇಕು ಎಂದು ಕರೆ ನೀಡಲು ಬಂದಿದ್ದೇನೆ ಎಂದು ಹೇಳಿರುವುದಾಗಿ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಸಂಬಂ‘ ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವಂತೆ ಪವನ್ ಕುಮಾರ್ ದೂರಿನಲ್ಲಿ ಮನವಿ ಮಾಡಿzರೆ.

The Daily News Media

The Daily News Media