ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಳ : ಸಚಿವ ಕಳವಳ

ದಿ ಡೈಲಿ ನ್ಯೂಸ್ ಬೆಂಗಳೂರು: ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಸದೃಢನಾಗಿರುತ್ತಾನೆ. ಇತ್ತೀಚಿನ ೧೦ ವರ್ಷಗಳಲ್ಲಿ ನರ ಹಾಗೂ ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕದ ವಿಷಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸು‘ಕರ್ ಹೇಳಿzರೆ. ಬೆಂಗಳೂರಿನಲ್ಲಿ ನಿಮ್ಹಾನ್ಸ ನೇತೃತ್ವದಲ್ಲಿ ನಡೆದ ಬ್ರೈನ್ ಹೆಲ್ತ ಇನಿಷೆಯೇಟಿವ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿ,
ಎಷ್ಟು ವರ್ಷ ಬದುಕುತ್ತೇವೆ ಅನ್ನುವುದರ ಜತೆಗೆ ಹೇಗೆ ಬದುಕುತ್ತೇವೆ ಅನ್ನುವುದು ಬಹಳ ಮುಖ್ಯ. ಮಾನಸಿಕ ಆರೋಗ್ಯದಲ್ಲಿ ಏರುಪೇರು, ಮನುಷ್ಯನ ಆರೋಗ್ಯದಲ್ಲಿ ಸಮಸ್ಯೆ ಸೃಷ್ಟಿಸುವ ಜತೆಗೆ ಆತಂಕ ತರುತ್ತಿದೆ. ಬೆಂಗಳೂರಿನಲ್ಲಿ ನಿಮ್ಹಾನ್ಸ ಸಂಸ್ಥೆ ಇರುವುದು ನಮ್ಮ ಸೌ‘ಗ್ಯ ಎಂದರು. ಸಾಂಕ್ರಾಮಿಕವಲ್ಲದ ರೋಗಗಳಿಂದಲೂ ಮೆದುಳಿಗೆ ಸಂಬಂಽಸಿದ ಕಾಯಿಲೆಗಳು ಹೆಚ್ಚಾಗುತ್ತಿವೆ. ಕಳೆದ ೧೦ ವರ್ಷಗಳಿಂದ ಮಾನಸಿಕ, ನರರೋಗಗಳು, ಸ್ಟ್ರೋಕ, ತಲೆನೋವಿನಿಂದ ನರಳುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಂಕಿ ಅಂಶಗಳ ಪ್ರಕಾರ ಮಾನಸಿಕ ರೋಗದಿಂದ ಸುಮಾರು ಶೇ.೭-೮ ಜನರು ಸಾವಿಗೀಡಾಗುತ್ತಿದ್ದು, ಸಾವಿನ ಅಂಶಗಳ ಪೈಕಿ ೨ನೇ ಸ್ಥಾನ ಪಡೆದಿದೆ ಎಂದು ಹೇಳಿದರು.  ಮಾನಸಿಕ ರೋಗಗಳಿಗೆ ಸಂಬಂಽಸಿದಂತೆ ಜಾಗೃತಿಯನ್ನು ‘ರತ ಸರ್ಕಾರ ಟಿ ಮಾನಸ ರಾಷ್ಟ್ರೀಯ ಅಭಿಯಾನ ಮಾಡುತ್ತಿದೆ. ರಾಜ್ಯ ಸರ್ಕಾರ ಹಬ್ ಸ್ಪೋಕ್ ಮಾಡೆಲ್ ಮೂಲಕ ಈಗಾಗಲೇ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಹಾ ನೆರವಿನೊಂದಿಗೆ ಪೈಲಟ್ ಪ್ರಾಜೆಕ್ಟ ಮಾಡುತ್ತಿದೆ. ಈ ಸೇವೆ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಕಡೆ ಲಭಿಸುವಂತೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು. ಪಿಎಚ್ ಸಿ ವೈದ್ಯರಿಗೆ ಮಾನಸಿಕ ರೋಗಿಗಳಿಗೆ ಕೌನ್ಸೆಲಿಂಗ್ ಹಾಗೂ ಚಿಕಿತ್ಸೆ ನೀಡುವ ಬಗ್ಗೆ ಈಗಾಗಲೇ ೩ ತಿಂಗಳ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಎನಎಂ, ಸಿಎಚಒಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಈ ಸಂಬಂ‘ ತರಬೇತಿ ನೀಡಿ ಮಾನಸಿಕ ರೋಗಿಗಳಿಗೆ ಚಿಕಿತ್ಸೆ ನೀಡುವ ಕುರಿತು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

The Daily News Media

The Daily News Media