ನೌಕರರ ಸಂಘದ ಮುಷ್ಕರ ಯಶಸ್ವಿಗೆ ಕರೆ

ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ: ಡಾ.ಅರವಿಂದ

ದಿ ಡೈಲಿ ನ್ಯೂಸ್ ಪಾಂಡವಪುರ
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಹಾಗೂ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿ ಮಾ.1ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲು ನಿ‘ರ್ರಿಸಲಾಗಿದೆ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಹಂಗಾಮಿ ಅ‘್ಯಕ್ಷ ಡಾ.ಸಿ.ಎ.ಅರವಿಂದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ೆ.21 ರಂದು ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅ‘್ಯಕ್ಷರ ಹಾಗೂ ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸ‘ೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ರಾಜ್ಯ ಸರ್ಕಾರಿ ನೌಕರರು ಅಂದು ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿ‘ರ್ರಿಸಲಾಗಿದೆ. ಸಂಘವು ಕರೆಕೊಟ್ಟಿರುವ ಅನಿರ್ದಿಷ್ಟಾವಧಿ ಮುಷ್ಕರ ಯಶಸ್ವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ಕಾರ್ಯದರ್ಶಿ ಎಂ.ಬಿ.ಕರುಣಕರ್, ಮಂಜುನಾಥ್, ಎಚ್.ಎನ್.ರಾಮಕೃಷ್ಣೇಗೌಡ, ನಾರಾಯಣಗೌಡ, ಕೃಷಿ ಅಧಿಕಾರಿ ಎಚ್.ವಿ.ಜಗದೀಶ್ ಇತರರಿದ್ದರು.

 

The Daily News Media

The Daily News Media