ರಾಜ್ಯದ ಜನರನ್ನು ೂಲ್ ಮಾಡುತ್ತಿದ್ದಾರೆ

ದಿ ಡೈಲಿ ನ್ಯೂಸ್ ಬೆಂಗಳೂರು
ಬಿಜೆಪಿ ಸರ್ಕಾರ ರಾಜ್ಯದ ಜನರನ್ನು ೂಲ್ ಮಾಡುತ್ತಲೇ ಬಂದಿದೆ. ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ಮಾತ್ರವಲ್ಲ, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದ ಅಷ್ಟೂ ‘ರವಸೆಗಳು ರಾಜ್ಯದ ಜನರನ್ನು ಮೂರ್ಖರನ್ನಾಗಿ ಮಾಡುವ ಪ್ರಯತ್ನ ಎಂದು ಕೆಪಿಸಿಸಿ ಅ‘್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಬೋವಿ ಸಮಾಜದವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗುವುದು ಎಂದು ಚುನಾವಣೆ ಸಮಯದಲ್ಲಿ ‘ರವಸೆ ನೀಡಿದ್ದರು. ಆದರೆ ಮಾಡಲಿಲ್ಲ. ಈ ಕಾರಣಕ್ಕೆ ಬಾಬುರಾವ್ ಚಿಂಚನಸೂರ್ ಅವರು ಬಿಜೆಪಿಯಲ್ಲಿ ನ್ಯಾಯ ಸಿಗುವುದಿಲ್ಲ ಎಂದು ಮತ್ತೆ ನಮ್ಮ ಪಕ್ಷಕ್ಕೆ ಮರಳಿದ್ದಾರೆ. ಇನ್ನು ಒಕ್ಕಲಿಗರು ಹಾಗೂ ಲಿಂಗಾಯತರು ಕೂಡ ಕ್ರಮವಾಗಿ 12% ಹಾಗೂ 15% ಮೀಸಲಾತಿ ಹೆಚ್ಚಳಕ್ಕೆ ಆಗ್ರಹ ಮಾಡಿದ್ದು, ಕೇವಲ 2% ನೀಡುವುದಾಗಿ ಸರ್ಕಾರ ಹೇಳಿದೆ. ಅಲ್ಪಸಂಖ್ಯಾತರ ಮೀಸಲಾತಿ ಕಿತ್ತು ಬೇರೆಯವರಿಗೆ ಕೊಟ್ಟಿದ್ದಾರೆ. 2% ಮೀಸಲಾತಿ ಹೆಚ್ಚಳ ನಾವು ಒಪ್ಪುವುದಿಲ್ಲ. ನಮಗೆ ಜನಸಂಖ್ಯೆ ಆ‘ಾರದ ಮೇಲೆ ಮೀಸಲಾತಿ ಕೊಡಬೇಕು. ಹೀಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಆದೇಶ ವಜಾ ಮಾಡಲಿದೆ.
ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಮಾಡಿರುವ ಮೀಸಲಾತಿ ಹೆಚ್ಚಳ ಕಾನೂನು ಸಂವಿ‘ಾನದ 9ನೇ ಶೆಡ್ಯೂಲ್‌ಗೆ ಸೇರಿಸಿಲ್ಲ. ಇವರು ಯಾವುದನ್ನು ಕಾನೂನು ಪ್ರಕಾರ ಮಾಡಿಲ್ಲ. ಮಾಜಿ ಮುಖ್ಯಮಂತ್ರಿ ಕ್ಷೇತ್ರದಲ್ಲಿ ಜನ ಗಲಾಟೆ ಮಾಡುತ್ತಿದ್ದಾರೆ ಎಂದರೆ ಸರ್ಕಾರದ ಈ ನಿರ್‘ಾರ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅರ್ಥ. ಸರ್ಕಾರ ಇತ್ತೀಚೆಗೆ ತೆಗೆದುಕೊಂಡಿರುವ ಎಲ್ಲಾ ನಿರ್‘ಾರಗಳು ಜನರನ್ನು ಮೂರ್ಖರನ್ನಾಗಿಸುವ ಕ್ರಮ. ಇದರ ಪರಿಣಾಮ ಮುಂದಿನ ಚುನಾವಣೆಯಲ್ಲಿ ತಿಳಿಯಲಿದೆ. ಜನ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

The Daily News Media

The Daily News Media